ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು.100 ದಿನಗಳಲ್ಲಿ