ಅವರಿಬ್ಬರ ಪ್ರೀತಿಗೆ ಮನೆಯವರ ವಿರೋಧ ಇತ್ತು. ಆದರೆ ವಿರೋಧದ ನಡುವೆಯೂ ಪ್ರೇಮಿಗಳಿಬ್ಬರು ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯಲ್ಲಿ ಅಂತರ್ಜಾತಿ ಮದುವೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ ಸುಳ್ಳ ಗ್ರಾಮದ ಬಸವರಾಜ್ ದೇಸಾಯಿ ಎಂಬ (27) ವರ್ಷದ ಯುವಕ ಮಹಾರಾಷ್ಟ್ರ ಮೂಲದ ಮೋನಿಕಾ ಎಂಬ (24) ವರ್ಷದ ಯುವತಿಯನ್ನ ಪ್ರೀತಿಸಿ ಮದುವೆ ಮಾಡಿಕೊಂಡವನು. ಇವರಿಬ್ಬರೂ ಕಳೆದ 4 ವರ್ಷಗಳಿಂದ ಪ್ರೀತಿಸುತಿದ್ದರು. ಜಾತಿ ಅಡ್ಡ ಬಂದ ಕಾರಣ ಇವರ ಮದುವೆಗೆ