ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ದಿನಕ್ಕೊಂದು ವಿವಾದ, ಹೇಳಿಕೆ ಹೊರಬೀಳುತ್ತಿರುವಂತೆ ಯಾವಾಗಲಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂಬ ಲೆಕ್ಕಾಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಅಹಿಂದ ಸಮಾವೇಶಕ್ಕೆ ಮುಂದಾಗಿದ್ದಾರೆ.ದೋಸ್ತಿ ಪಕ್ಷಗಳ ನಡುವೆ ಶುರುವಾಯ್ತಾ ಮಧ್ಯಂತರ ತಯಾರಿ...? ಎನ್ನುವ ಚರ್ಚೆ ಆರಂಭಗೊಂಡಿದೆ. ಅತ್ತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ನಡೆಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಅಹಿಂದ ಸಮಾವೇಶ ಆಯೋಜಿಸುತ್ತಿದ್ದಾರೆ. ಅಹಿಂದ ಸಮಾವೇಶಕ್ಕೆ ಚಾಲನೆ ನೀಡುತ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.