ದೇಶಾದ್ಯಂತ ಭಾರಿ ಸುದ್ದಿ ಮಾಡಿದ್ದ ಯಶ್ ನಟನೆಯ ಕೆಜಿಎಫ್ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುನ್ನತ ಕನ್ನಡ ಜನಪ್ರಿಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ ಕನ್ನಡ ಜನಪ್ರಿಯ ವಿಭಾಗದಲ್ಲಿ ಪ್ರಥಮಗಳ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 12ನೇ ಅವತರಣಿಕೆಯ ಸಮಾರೋಪ ಸಮಾರಂಭದಲ್ಲಿ ಕಲಾತ್ಮಕ ನಿರ್ದೇಶಕ ಎಂ.ವಿದ್ಯಾ ಶಂಕರ್ ಅವರು ಪ್ರಶಸ್ತಿಗಳನ್ನು ಪ್ರಕಟಿಸಿದರು. ಏಷಿಯಾದ ಸಿನಿಮಾ