ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯವರು ಸಚಿವರ ಗಮನಕ್ಕೆ ತಂದಿದ್ದಾರೆ. ಪ್ರಸ್ತುತ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ