ರೈತರಿಗೆ ಸೇರಿದ ಎರಡು ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ತಿಂದಿದೆ. ಏಕಾಏಕಿಯಾಗಿ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಹುಲಿಯಿಂದ ಆ ಪ್ರದೇಶದ ಜನರು ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮಿತಿಮೀರುತ್ತಿವೆ. ಹುಲಿ ದಾಳಿಗೆ ಮತ್ತೆರಡು ಜಾನುವಾರುಗಳು ಬಲಿಯಾಗಿವೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಚಿಕ್ಲಿ ಹೊಳೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಲ್ಲದೇ ಶುಂಠಿಕೊಪ್ಪ ವ್ಯಾಪ್ತಿಯಲ್ಲಿಯೂ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ