ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹಿರಿಯಡ್ಕ ಸಮೀಪದಲ್ಲಿರುವ ಶಿರೂರು ಮೂಲ ಮಠಕ್ಕೆ ತೆರಳಿ ತನಿಖೆ ನಡೆಸಿದ್ದಾರೆ.ಸ್ವಾಮೀಜಿ ಸಾವಿನ ಪ್ರಕರಣದ ತನಿಖೆಯು ಎಸ್ಪಿ ನಿರ್ದೇಶನದಲ್ಲಿ ಮುಂದುವರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರು ಮೂಲಮಠಕ್ಕೆ ಭೇಟಿ ನೀಡಿದ್ದಾರೆನ್ನಲಾಗಿದೆ. ಮಠದ ಕೆಲವೊಂದು ಕೋಣೆಗಳಿಗೆ ತೆರಳಿ ಪರಿಶೀಲನೆ ನಡೆಸಿರುವ ಎಸ್ಪಿ, ಸಿಸಿ ಕ್ಯಾಮೆರಾ ಹಾಗೂ ಡಿವಿಆರ್ ಸಂಬಂಧ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.