ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬೆಳ್ಳಿಯಪ್ಪ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದ್ದು, ಆರೋಪಿತರ ಸ್ನೇಹಿತರ ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರ ತಂಡ ಮೊಬೈಲ್ಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಕಳೆದ ವಾರ ಮಳೆಯ ಕಾರಣಕ್ಕೆ ಕಾಲೇಜಿಗೆ ರಜೆ ಇತ್ತು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಸೋಮವಾರದಿಂದ ಕಾಲೇಜು ಆರಂಭವಾಗಬೇಕಿತ್ತು. ಆದರೆ ಕಾಲೇಜಿನ ಶೈಕ್ಷಣಿಕ ವಾತಾವರಣ ಕೆಡಬಾರದೆಂದು ಅನಿರ್ದಿಷ್ಟಾವಧಿಗೆ ರಜೆ ಮುಂದುವರಿಸಿ