ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಗೋಲ್ಮಾಲ್ ಬಗ್ಗೆ ತನಿಖೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಇಂದು ಜೈಲಿಗೆ ಭೇಟಿ ನೀಡಿದ್ದಾರೆ. ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ ಮತ್ತು ಛಾಪಾ ಕಾಗದ ಹಗರಣ ರೂವಾರಿ ಕರೀಂಲಾಲ್ ತೆಲಗಿ ಕೋಟಿ ಕೋಟಿ ಹಣ ನೀಡಿ ವಿಐಪಿ ಆತಿಥ್ಯ ಪಡೆಯುತ್ತಿದ್ದಾರೆ ಎನ್ನುವ ಬಗ್ಗೆ ಕೆಲದಿನಗಳ ಹಿಂದೆ ಕಾರಾಗೃಹ ಡಿಐಜಿಯಾಗಿದ್ದ ರೂಪಾ ಸರಕಾರಕ್ಕೆ ವರದಿ ಸಲ್ಲಿಸಿದ್ದರು. ಪರಪ್ಪನ ಜೈಲಿನ ಅವ್ಯವಹಾರಗಳ