ಬೆಳಗಾವಿ : ರಾಷ್ಟ್ರೀಯ ಯುವ ಜನೋತ್ಸವ ಈ ಬಾರಿ ಜನವರಿ 12 ರಿಂದ 16 ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿದ್ದು,ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ರೇಷ್ಮೆ, ಕ್ರೀಡಾ ಹಾಗೂ ಯುವಜನ ಸಬಲೀಕರಣ ಇಲಾಖೆಯ ಸಚಿವರಾದ ಡಾ.ನಾರಾಯಣಗೌಡ ಅವರು ತಿಳಿಸಿದರು.ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯುವಜನೋತ್ಸವದಲ್ಲಿ ದೇಶದ ಎಲ್ಲ ರಾಜ್ಯಗಳಿಂದ 7,500 ಕಲಾವಿದರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.26ನೇ ರಾಷ್ಟ್ರೀಯ ಯುವಜನೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ