ಕೋಲಾರ : ಯರಗೋಳ ಡ್ಯಾಂ ಯೋಜನೆಯಲ್ಲಿ ಕೋಟ್ಯಂತರ ರೂ. ಅಕ್ರಮವಾಗಿದ್ದು ಯೋಜನೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಈ ಆರೋಪ ಮಾಡಿದ್ದು, ಸೂಕ್ತ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಈ ಡ್ಯಾಂ ನಿರ್ಮಾಣವಾಗಿದೆ. ಪೈಪ್ ಲೈನ್ ಸೇರಿದಂತೆ ನೀರು ಸರಬರಾಜು ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಕರ್ನಾಟಕ