Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಚಪ್ಪಾಳೆ ಹೊಡೊಯೋದು ಹೀಗಾ?

ಮಂಗಳೂರು| Jagadeesh| Last Modified ಭಾನುವಾರ, 22 ಮಾರ್ಚ್ 2020 (18:53 IST)
ಜನತಾ ಬಂದ್ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಈ ಕೆಲಸ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ, ಭಾರತವನ್ನು ಸುರಕ್ಷಿತ ಮತ್ತು ಆರೋಗ್ಯವಾಗಿಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಚಪ್ಪಾಳೆ ತಟ್ಟುವ ಮೂಲಕ ಗೌರವ ಸೂಚಿಸಲಾಯಿತು.

ಸಂಜೆ 5 ಗಂಟೆಗೆ ಚಪ್ಪಾಳೆ ಹೊಡೆಯುವ ಮೂಲಕ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರು ಅವರ ಧರ್ಮಪತ್ನಿ ಹಾಗೂ ಮಕ್ಕಳು ಹಾಗೂ ಕುಟುಂಬದವರ ಜೊತೆಗೆ ಸೇರಿ ತಮ್ಮ ಸ್ವಗೃಹದಲ್ಲಿ ಕೃತಜ್ಞತೆ ಸಲ್ಲಿಸಿದರು.

ಜನತಾ ಕರ್ಫ್ಯೂವನ್ನು ಯಶಸ್ವಿಗೊಳಿಸಿದ ಜನತೆಗೆ ಧನ್ಯವಾದ ತಿಳಿಸಿದ ಕಟೀಲ್ ಅವರು, ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಹಾಗೂ ಸ್ವಚ್ಛತಾ ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಅಲ್ಲದೇ ಜಿಲ್ಲಾಡಳಿತದ ಸಿಬ್ಬಂದಿಗೆ ಗೌರವ ಸೂಚಿಸಿ, ಅಭಿನಂದಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :