ಬೆಂಗಳೂರು : ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಪೊಲೀಸರಿಂದ ತಪ್ಪಿಸಿಕೊಳ್ಳಲು ತಲೆಮೆರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಅವರು ಮಾಜಿ ಶಾಸಕ ಯೋಗೇಶ್ವರ್ ತೆಕ್ಕೆಯಲ್ಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಹುಡುಕಲು ಪೊಲೀಸರು ಒಟ್ಟು 4 ತಂಡಗಳನ್ನು ರಚಿಸಿ ಸತತವಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಾಸಕ ಗಣೇಶ್ ನಾಪತ್ತೆಯಾಗಿ 10 ದಿನಗಳು ಕಳೆದರೂ, ಶಾಸಕರನ್ನು ಹುಡುಕುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಆದರೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಂಪ್ಲಿ