ಬೆಂಗಳೂರು : ಕಾಂಗ್ರೆಸ್ ನಿಂದ ಮಾಜಿ ಶಾಸಕ ಆರ್.ರೋಷನ್ ಬೇಗ್ ಅಮಾನತುಗೊಂಡಿರುವುದರ ಹಿಂದೆ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂಬ ಮಾತು ಇದೀಗ ಕೇಳಿಬರುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆ ಮಾಜಿ ಶಾಸಕ ಆರ್.ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಆದರೆ ಈ ಬೆಳವಣೆಗೆಯ ಹಿಂದೆ ಎರಡು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿದ್ದ ಸಿದ್ದರಾಮಯ್ಯ ತಂತ್ರವಿದೆ ಎಂಬ ಮಾತು ಕೇಳಿಬರುತ್ತಿದೆ. ಎರಡು ದಿನಗಳಿಂದ ದೆಹಲಿಯಲ್ಲಿರುವ ಸಿದ್ದರಾಮಯ್ಯ ಎ.ಕೆ.ಆ್ಯಂಟಿನಿ ಅವರನ್ನು ಭೇಟಿಯಾಗಿ