ಅಣ್ಣ ತಮ್ಮಂದಿರಂತೆ ಇರುವ ಎರಡು ಗ್ರಾಮಗಳ ನಡುವೆ ಅಧ್ಯಕ್ಷನೊಬ್ಬ ಹುಳಿಹಿಂಡಿ ತಮಾಷೆ ನೋಡ್ತಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.ತುಮಕೂರು ಜಿಲ್ಲೆಯಲ್ಲಿ ವಿ ಎಸ್ ಎಸ್ ಸಂಘದ ಅಧ್ಯಕ್ಷನ ಗೂಂಡಾಗಿರಿಗೆ ಗ್ರಾಮಸ್ಥರು ಬೇಸತ್ತಿದ್ದಾರೆ. ಅಣ್ಣ-ತಮ್ಮಂದಿರಂತಿದ್ದ ಗ್ರಾಮಗಳ ನಡುವೆ ತಂದಿಕ್ಕಿ ತಮಾಷೆ ನೋಡುತ್ತಿರುವ ಅಧ್ಯಕ್ಷ ವಿಶ್ವನಾಥನ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ.ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಶಿಡ್ಲಕಟ್ಟೆ- ಬರಕನಹಾಳ್ ಎಂಬ ಹೆಸರಿದ್ದ ಸಂಘದ ಹೆಸರನ್ನು ವಿಶ್ವನಾಥ್ ಅಧ್ಯಕ್ಷನಾದ ಮೇಲೆ,