ಹಿರಿಯ ಸಚಿವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್ ವಿಪಕ್ಷ ನಾಯಕರಾಗಲು ನಾಲಾಯಕ್ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಅಧಿವೇಶನದಲ್ಲಿ ಮಾತನಾಡಿದ ಅವರು, ಹಿರಿಯ ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್ರನ್ನು ಕೊಲೆಗಡುಕ ಎನ್ನುತ್ತಾರೆ. ಇತರ ನಾಯಕರ ಬಗ್ಗೆ ಮನಬಂದಂತೆ ವಾಗ್ದಾಳಿ ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿ ನಾಯಕನಾಗಲು ನಾಲಾಯಕ್ ಎಂದು ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ರಮೇಶ್