ಶಿವಮೊಗ್ಗ : ಈ ಆರೋಪದಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೇನೆ.ನನಗೆ ಪೂರ್ಣವಿಶ್ವಾಸ ಇದೆ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ನಾಳೆ ರಾಜೀನಾಮೆ ಕೊಡುತ್ತಿದ್ದೇನೆ. ಯಾರು ನನ್ನನ್ನು ಬೆಳೆಸಿದ್ದಾರೆ, ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕರಿಗೆ ಇರಿಸು ಮುರಿಸು ಆಗಬಾರದು ಹೀಗಾಗಿ ರಾಜೀನಾಮೆ ಕೊಡುತ್ತಿದ್ದೇನೆ.ನಾಳೆ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ