ಮಣಿಪಾಲ ಸಮೀಪದ ಇಸ್ಪೀಟ್ ಕ್ಲಬ್ ಒಂದರಲ್ಲಿ ತಂಡವೊಂದರ ಮಾಲಕನನ್ನು ಇರಿದು ಕೊಂದಿರುವ ಘಟನೆ ನಡೆದಿದೆ.ಮೃತರನ್ನು ಉಡುಪಿಯ ಪುತ್ತೂರು ಗ್ರಾಮದ ಗುರುಪ್ರಸಾದ್ ಭಟ್ (45) ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಅವರು ಕ್ಲಬ್ ನಲ್ಲಿದ್ದ ವೇಳೆ ಓಮ್ನಿಯಲ್ಲಿ ಆಗಮಿಸಿದ ದುಷ್ಕರ್ಮಿಗಳು ಕ್ಲಬ್ ಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ನಂತರ ಅದೇ ಕಾರಿನಲ್ಲಿ ತಂಡ ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಗುರುಪ್ರಸಾದ್ ರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.