ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡು ಸಕ್ರಮೀಕರಣ ಮಾಡಿಕೊಂಡ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ-1964 ನಿಯಮ 94ಸಿ ಮತ್ತು 94ಸಿಸಿ ರನ್ವಯ ಕಲಬುರಗಿ ಜಿಲ್ಲೆಯ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡು ಸಕ್ರಮೀಕರಣ ಮಾಡಿಕೊಂಡ ಫಲಾನುಭವಿಗಳಿಗೆ ಕಂದಾಯ ಸಚಿವ ಆರ್. ಅಶೋಕ ಹಕ್ಕು ಪತ್ರಗಳನ್ನು ವಿತರಿಸಿದರು.ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಾಂಕೇತಕವಾಗಿ ಹಲವು ಫಲಾನುಭವಿಗಳಿಗೆ ಹಕ್ಕು ಪತ್ರ