ಆದಾಯ ತೆರಿಗೆ ಅಧಿಕಾರಿಗಳ ಸತತ ಮೂರನೇ ದಿನದ ವಿಚಾರಣೆಯಿಂದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮೂಲಗಳು ತಿಳಿಸಿವೆ. ಸಚಿವ ಶಿವಕುಮಾರ್ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಡಾ.ರಮಣ್ ರಾವ್ ನೇತೃತ್ವದ ತಂಡ ಅವರ ನಿವಾಸಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ವೈದ್ಯರ ತಂಡ ಸಚಿವ ಶಿವಕುಮಾರ್ ಬಿಪಿ ಸೇರಿದಂತೆ ಆರೋಗ್ಯದ ಬಗ್ಗೆ ತಪಾಸಣೆ ನಡೆಸಿದ್ದಾರೆ. ತಪಾಸಣೆಯ ನಂತರ