ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ; ಇದರ ಹಿಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೈವಾಡವಿದೆ ಎಂದ ಸಚಿವ

ಮಂಡ್ಯ, ಗುರುವಾರ, 28 ಮಾರ್ಚ್ 2019 (10:33 IST)

:, ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಮತ್ತು ಅವರ ಸಂಬಂಧಿಕರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಪುಟ್ಟರಾಜು ಸ್ವಗ್ರಾಮ ಚಿನಕುರಳಿಯಲ್ಲಿರುವ ಮನೆ ಮೇಲೆ ಬೆಳಗ್ಗೆ ಐಟಿ ದಾಳಿ ನಡೆದಿದೆ. ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ. ನಸುಕಿನ ಜಾವದಿಂದ ಪುಟ್ಟರಾಜು ನಿವಾಸ, ಸಂಬಂಧಿಗಳ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವ ಸಿ.ಎಸ್. ಪುಟ್ಟರಾಜು, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ದೂರು ನೀಡಿದ ಬಳಿಕ ಈ ದಾಳಿ ನಡೆಸಲಾಗಿದೆ. ಇದರ ಹಿಂದೆ ಅವರ ಕೈವಾಡವಿದೆ ಎಂದು ಪರೋಕ್ಷವಾಗಿ ಸುಮಲತಾ ಅವರ ಮೇಲೆ ಆರೋಪ ಮಾಡಿದ್ದಾರೆ.


ಈ ದಾಳಿಯನ್ನು ತಮ್ಮ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ನಮ್ಮನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿರುವ ಕೇಂದ್ರ ಸರ್ಕಾರದ ಕುತಂತ್ರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಗುಡುಗಿರುವ ಸಿ.ಎಸ್. ಪುಟ್ಟರಾಜು, ಇಂತಹ ದಾಳಿಗಳಿಂದ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸರ್ವಾಧಿಕಾರಿ ಕಿಮ್‌ ಎದುರು ನಿಂತು ಫೋಟೊ ತೆಗೆದ ಫೋಟೋಗ್ರಾಫರ್‌ ಗೆ ಆದ ಗತಿ ಏನು ಗೊತ್ತಾ?

ಉತ್ತರ ಕೊರಿಯಾ : ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್ ಉನ್ ನ ಪೋಟೊ ತೆಗೆಯಲು ಕಿಮ್‌ ನ ವೈಯಕ್ತಿಕ ...

news

ಕಾಂಗ್ರೆಸ್, ಜೆಡಿಎಸ್ ಬೆಂಬಲಿಗರ ಮೇಲೆ 250ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ನಡೆಸಲಿದ್ದಾರೆ- ಸಿಎಂ ಕುಮಾರಸ್ವಾಮಿ

ಮಂಡ್ಯ : ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ...

news

ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣದಲ್ಲಿ ನೋವಿನ ಛಾಯೆ ಇಲ್ಲ, ಕೇವಲ ಸಿನಿಮಾ ಡೈಲಾಗಷ್ಟೇ-ಸುಮಲತಾ ವಿರುದ್ಧ ಸಿಎಂ ವಾಗ್ದಾಳಿ

ಮಂಡ್ಯ : ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣ ಮಾಡಿದ ವಿಡಿಯೋವನ್ನು ನೋಡಿದರೆ ಅವರಲ್ಲಿ ಯಾವುದೇ ನೋವಿನ ಛಾಯೆ ...

news

ಒಮ್ಮೆ ಲೈಂಗಿಕ ಸಂಪರ್ಕ ಹೊಂದಿದ್ದ ಮಹಿಳೆಯ ಜೊತೆ ಮತ್ತೆ ಮಲಗಲು ಬಯಸುವುದಿಲ್ಲ.ಇದಕ್ಕೆ ಕಾರಣವೇನು?

ಬೆಂಗಳೂರು : ಪ್ರಶ್ನೆ : ನಾನು ಹಿಂದೆ ಹಲವಾರು ಮಹಿಳೆಯರ ಜೊತೆ ಲೈಂಗಿಕ ಸಂಪರ್ಕವನ್ನು ಹೊಂದಿದ್ದೇನೆ. ಆದರೆ ...