ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಗೆ ಹೆದರೋದಿಲ್ಲ. ಅನಗತ್ಯವಾಗಿ ಐಟಿ ದಾಳಿಯನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಕಾಲದಲ್ಲಿಯೂ ಐಟಿ ದಾಳಿಗಳಾಗುತ್ತಾ ಬಂದಿವೆ. ಆದರೆ, ಸದ್ಯಕ್ಕೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರನ್ನು ಹುಡುಕಿ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ ಮಾಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದಾಗ ಸಂಬಂಧಪಟ್ಟವರು ಐಟಿ ರಿಟರ್ನ್ಸ್ ಸಲ್ಲಿಸಿದ್ದಾರೆಯೇ ಎಂದು ಪರಿಶೀಲಿಸುತ್ತಾರೆ. ಪರಿಶೀಲನೆಯನ್ನೇ ಬಿಜೆಪಿಯವರು