ನನಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T. ರವಿ ಮತ್ತು ಅವರ ಪಟಾಲಂ ಷಡ್ಯಂತ್ರವೇ ಕಾರಣ ಎಂದು ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ M.P. ಕುಮಾರಸ್ವಾಮಿ ದೂರಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದೇನೆ. ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ಸ್ಪೀಕರ್ಗೆ ಫ್ಯಾಕ್ಸ್ ಕಳಿಸಿದ್ದೇನೆ ಎಂದು ತಿಳಿಸಿದರು. ಮತದಾರರು