ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಬಳಿಕ ರಾಮನಗರದಲ್ಲಿ ನಿಖಿಲ್ ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಈ ವೇಳೆ ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ್ರು. ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ, ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ಹೀಗಾಗಿ ಮೋದಿ ಹೆಸರು ಹೇಳ್ಕೊಂಡು ಚುನಾವಣೆ ಮಾಡ್ತಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಇದೆ ಎಂದು ಹೇಳಿದ್ರು..