ಬಸವಣ್ಣನವರ ತತ್ವದಂತೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದ್ದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಥಣಿಯಲ್ಲಿ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ, ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಣ ಜಮಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ, ನರೇಂದ್ರ ಮೋದಿ ಯಾವುದೇ ಭರವಸೆ ಈಡೇರಿಸಿಲ್ಲ