ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಸಂವಿಧಾನದ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ವಿಶ್ವಕರ್ಮ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಗಡೆ ಮಾತಿನಿಂದ ಶ್ರೀನಿವಾಸ ಪ್ರಸಾದ್ ಅವರಿಗೆ ಅಸಮಾಧಾನವಾಗಿದೆ. ಆದ್ದರಿಂದ ಅವರು ಖಂಡಿಸಿದ್ದಾರೆ. ಅಷ್ಟಕ್ಕೂ ಸಂವಿಧಾನದ ಬಗ್ಗೆ ಅನಂತಕುಮಾರ ಹೆಗಡೆ ಅವರು ಮಾತನಾಡಿರುವುದು ಖಂಡನೀಯ ಎಂದಿದ್ದಾರೆ. ಅನಂತಕುಮಾರ ಹೆಗಡೆ ಅವರು ಸಂವಿಧಾನದ ಬಗ್ಗೆ ಮಾತನಾಡಿರುವುದಕ್ಕೆ ಈಗಾಗಲೇ ಕ್ಷಮೆ ಕೇಳಿದ್ದಾರೆ. ಆದ್ದರಿಂದ ಮತ್ತೆ