ಸ್ಟಾಲಿನ್ ಪುತ್ರನ ಹೇಳಿಕೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಗಳು, ಉದಯನಿಧಿ ಸ್ಟಾಲಿನ್ ಒಂದು ರಾಜ್ಯದ ಮಂತ್ರಿಯಾಗಿದ್ದಾರೆ. ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ.‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು. ಇದು ಸನಾತನ