ದೇವಸ್ಥಾನಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲು ಸರಕಾರ ಮುಂದಾಗಿದೆ. ರಾಜ್ಯದ ಎ ಶ್ರೇಣಿಯ ದೇವಸ್ಥಾನಗಳು ಮಾತ್ರವಲ್ಲದೇ ಸಂಪನ್ಮೂಲ ಕ್ರೋಢೀಕರಿಸಿ ಬಿ ಮತ್ತು ಸಿ ಶ್ರೇಣಿಯ ದೇವಸ್ಥಾನಗಳಲ್ಲಿಯೂಡ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಹೀಗಂತ ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.ಬಡ ಕುಟುಂಬಗಳಿಗೆ ಅನುಕೂಲ ಕಲ್ಪಿಸಬೇಕು