ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿಲ್ಲ. ಬ್ಯಾಂಕ್ ಖಾತೆಗಳು ಬ್ಲಾಕ್ ಆಗಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದಾಯ ತೆರಿಗೆ ಇಲಾಖೆ ಎರಡನೇ ಬಾರಿಗೆ ನೋಟಿಸ್ ರವಾನಿಸಿದೆ ಎನ್ನುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿಲ್ಲ. ಬ್ಯಾಂಕ್ ಖಾತೆಗಳು ಬ್ಲಾಕ್ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಹಲವಾರು ವ್ಯವಹಾರಗಳನ್ನು ಮಾಡುತ್ತಿರುವುದರಿಂದ ನೂರಾರು ಖಾತೆಗಳನ್ನು ಹೊಂದಿರುತ್ತೇವೆ. ಪ್ರತಿಯೊಂದು ವ್ಯವಹಾರಕ್ಕೂ ಪ್ರತ್ಯೇಕ