ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಹೇಳಿದ್ದಾಗಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವಂತೆ ಡಿಕೆಶಿಗೆ ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ. ಅವರು ಮಣಿಯದಿದ್ದಾಗ ಅವರ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಒತ್ತಡ ಹೇರಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಪಕ್ಷಗಳ ನಾಯಕರುಗಳನ್ನು ಹೆದರಿಸಿ, ಬೆದರಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಒತ್ತಡ ಹೇರಲಾಗುತ್ತಿದೆ. ಆದರೆ,