ಬೆಂಗಳೂರು: ನಾಗಮಂಗಲ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಲುವರಾಯ ಸ್ವಾಮಿ ಆಪ್ತನ ಮನೆ ಮೇಲೆ ಇಂದು ಬೆಳ್ಳಂ ಬೆಳಿಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಜೆಡಿಎಸ್ ನಿಂದ ಬಂಡಾಯವೆದ್ದು ಕಾಂಗ್ರೆಸ್ ಪಾಳಯ ಸೇರಿಕೊಂಡಿರುವ ಚಲುವರಾಯ ಸ್ವಾಮಿ ಆಪ್ತ ಸುಖಧರೆಯ ಲಕ್ಷ್ಮೀನಾರಾಯಣ ಎಂಬವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.ತಪಾಸಣೆ ನಡೆಸಿದ ಅಧಿಕಾರಿಗಳಿಗೆ ಸುಮಾರು 30 ಸಾವಿರ ರೂ ನಗದು ಸಿಕ್ಕಿದ್ದು, ವಿಚಾರಣೆ ನಡೆಸಿದ ಬಳಿಕ ಅದನ್ನು ಮರಳಿಸಿದ್ದಾರೆ