ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ.ಲೋಕಸಭಾ ಚುನಾವಣೆ ವೇಳೆ ಮಂಡ್ಯ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ ಸೇರಿದಂತೆ ಸಾಕಷ್ಟು ಜಾಗಗಳಲ್ಲಿ ತಪಾಸಣೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದರು. ಕೆಲವು ಕಡೆ ಹಣ, ಆಸ್ತಿ ಸಿಗದಿದ್ದರೂ