ಕುಂದಾನಗರಿಯಲ್ಲಿ ಮುಂದುವರೆದ ಐಟಿ ದಾಳಿ!

ಬೆಳಗಾವಿ| Vinod| Last Modified ಶುಕ್ರವಾರ, 20 ಜನವರಿ 2017 (11:56 IST)
ಕುಂದಾನಗರಿ ಬೆಳಗಾವಿಯಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಇಂದು ಬೆಳ್ಳಂಬೆಳಗ್ಗೆ ರಮೇಶ್ ಜಾರಕಿಹೊಳಿ ಅವರ ಪತ್ನಿಯ ಸಹೋದರಿ ಮನೆ ಹಾಗೂ ಕಚೇರಿಗಳು ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕೋಡಿಯ ಬೇನಾಡಿ ಗ್ರಾಮದಲ್ಲಿರುವ ರಮೇಶ್ ಜಾರಕಿಹೊಳಿ ಅವರ ಪತ್ನಿಯ ಸಹೋದರಿ ಮೇಘಾ ಅವರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 
 
ರಮೇಶ್ ಜಾರಕಿಹೊಳಿ ಅಧ್ಯಕ್ಷರಾಗಿರುವ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಶಂಕರ್ ಮನೆ ಮನೆ ಹಾಗೂ ಕಚೇರಿಗಳ ಮೇಲೆ ಕೂಡಾ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 
 
ಯೂತ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವೀದ್ ಮುಲ್ಲಾ ,ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸ ಹಾಗೂ ಅವರ ಸಹೋದರಿಯ ನಿವಾಸ ಮತ್ತು ಕಚೇರಿಗಳ ಮೇಲೆ ಇಂದು ಕೂಡಾ ಐಟಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದು, ಈ ವೇಳೆ ಸೋಲಾರ್ ವಿದ್ಯುತ ಘಟಕಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :