ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ್ ನಿವಾಸದ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ರದುರ್ಗದ ಭೀಮಸಮುದ್ರದಲ್ಲಿರುವ ಸಂಸದ ಸಿದ್ದೇಶ್ವರ್ ನಿವಾಸದ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಸಿದ್ದೇಶ್ವರ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಕೂಡಾ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ