ಬೆಂಗಳೂರು : ಕುವೆಂಪು ಅವರ ಧ್ಯೇಯವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಲಾಗಿದೆ. ಇದು ಕುವೆಂಪು ಅವರಿಗೆ ಮಾಡಿರುವ ಅಪಮಾನ. ಇದನ್ನು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಮುಖ್ಯಕಾರ್ಯದರ್ಶಿಗೆ ಅಧಿಕಾರ ನೀಡಿದವರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು. ವಸತಿ ಶಾಲೆಗಳಲ್ಲಿ ಅಳವಡಿಸಲಾಗಿರುವ ರಾಷ್ಟ್ರಕವಿ ಕುವೆಂಪು ಅವರ ಜ್ಞಾನದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ವಾಕ್ಯವನ್ನು ತಿದ್ದುಪಡಿ ಮಾಡಿರುವ ವಿಷಯ ಸೋಮವಾರ ಅಧಿವೇಶನದಲ್ಲಿ ಬಿಜೆಪಿ ಮತ್ತು