ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸುಳ್ಳು ಹೇಳಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸುಳ್ಳು ಹೇಳಿದ್ದು ಅವರು, ನಾನಲ್ಲ ಎಂದು ತಿರುಗೇಟು ನೀಡಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ರೀಡೂ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕಟುಸತ್ಯ ಎದುರಿಸುವ ಕಾಲ ಬಂದಿದೆ. ಅರ್ಕಾವತಿ ರೀಡೂ ಬಗ್ಗೆ ಬೊಮ್ಮಾಯಿ ಹೇಳ್ತಿರೋದಲ್ಲ, ನ್ಯಾ.ಕೆಂಪಣ್ಣ ಅವರೇ ಈ ಬಗ್ಗೆ ಹೇಳಿದ್ದಾರೆ...ಸುಳ್ಳು ಹೇಳುತ್ತಿರುವುದು ನಾನಲ್ಲ, ಸಿದ್ದರಾಮಯ್ಯನವರು.