ತನ್ನ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು, ವಿಜಯೇಂದ್ರನಿಗೆ ಪಟ್ಟ ನೀಡಿದ್ದಾರೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಟೀಕೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ನಾಯಕರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಕಡೆಗಣಿಸಿದ್ದರು. ಆ ತಪ್ಪು ಮುಚ್ಚಿಕೊಳ್ಳಲು ಈಗ ಅವರ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದ್ದಾರೆ. ಆದರೆ, ನಿಜವಾಗಿಯೂ ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಜವಾಬ್ದಾರಿ ಹೊರಿಸುವಂತಹುದ್ದಾಗಿದೆ ಎಂದು ಆಯನೂರು