ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಅಲರ್ಟ್ ನೀಡಲಾಗಿದೆ. ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿಯಲ್ಲಿ ಮ್ಯಾಂಡಸ್ ಚಂಡಮಾರುತ ಅಬ್ಬರದ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಮತ್ತು ಪ್ರವಾಸಿಗರಿಗೆ ಕಡಲತೀರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಇಂದಿನಿಂದ ನಾಲ್ಕು ದಿನ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ