ಬೆಂಗಳೂರು: ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನೇ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.