ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬಿಜೆಪಿ ಸೇರ್ಪಡೆ ವದಂತಿ, ಇದು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ರೈಲ್ವೆ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳ ಸತ್ಯಕ್ಕೆ ದೂರವಾಗಿವೆ ಎಂದರು. ಕಾಂಗ್ರೆಸ್ ಪಕ್ಷದ ಯಾವುದೇ ಮುಖಂಡರು ಬಿಜೆಪಿ ಸೇರುವುದಿಲ್ಲ. ಅದೊಂದು ಕೋಮುವಾದಿಗಳ, ಭ್ರಷ್ಟಾಚಾರಿಗಳ ಪಕ್ಷವಾಗಿದೆ ಎಂದು ವಾಗ್ದಾಳಿ