ಲಿಂಗಾಯುತ ಪ್ರತ್ಯೇಕ ಧರ್ಮ ಕುರಿತಂತೆ ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯಬೇಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ. ವೀರಶೈವ-ಲಿಂಗಾಯುತ ಮಠಾಧೀಶರು ಒಂದು ಕಡೆ ಸೇರಿ ಒಮ್ಮತದ ನಿರ್ಧಾರಕ್ಕೆ ಬಂದಲ್ಲಿ ಬಿಜೆಪಿ ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ರಾಜಕೀಯಕ್ಕಾಗಿ ವೀರಶೈವ-ಲಿಂಗಾಯುತ ಧರ್ಮವನ್ನು ಒಡೆಯಲು ಸಿದ್ದರಾಗಿದ್ದಾರೆ. ಒಡೆದು ಆಳುವ ಕನಸನ್ನು ಅವರು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಲಿಂಗಾಯುತ ಪ್ರತ್ಯೇಕ