ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿದ ಭಾಷಣ ಸುಳ್ಳಿನ ಕಂತೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದೆ. ರಾಜ್ಯಪಾಲರ ಭಾಷಣದಲ್ಲಿ 8200 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ. ಇಷ್ಟು ಘಟಕಗಳು ಆರಂಭವಾಗಿಯೇ ಇಲ್ಲ. 8200 ಶುದ್ಧ ಕುಡಿಯುವ