ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾದರೆ ಯಾವುದೇ ಕ್ರಮವಿಲ್ಲ. ಆದರೆ, ಯಡಿಯೂರಪ್ಪ ವಿರುದ್ಧ ದೂರು ನೀಡಿದ ದಿನವೇ ಎಫ್ಐಆರ್ ಹಾಕಲಾಗುತ್ತದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಕೆಟ್ಟ ಇಮೇಜ್ ಸೃಷ್ಟಿಸಲು ದೂರು ದಾಖಲಿಸಲಾಗುತ್ತಿದೆ. ಎಸಿಬಿ ಅಧಿಕಾರಿಗಳು ಪದೇ ಪದೇ ಸಮನ್ಸ್ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸಿಬಿ ಅಧಿಕಾರಿಗಳ ವರ್ತನೆ ನೋಡಿದಲ್ಲಿ ತುರ್ತುಪರಿಸ್ಥಿತಿ