ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳನ್ನು ಹಣಿಯಲು ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ದಳ ಭ್ರಷ್ಟರ ವಿರುದ್ಧ ತನಿಖೆ ನಡೆಸುವುದಿಲ್ಲ. ಭ್ರಷ್ಟರ ರಕ್ಷಣೆಗಾಗಿ ನಿಂತಿದೆ ಎಂದು ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ. ಆದ್ದರಿಂದಲೇ ಎಸಿಬಿ ಅಧಿಕಾರಿಗಳನ್ನು ಉಪಯೋಗಿಸಿಕೊಂಡು ಐಟಿ ಅಧಿಕಾರಿಗಳ ಮೇಲೆ ದಾಳಿ ನಡೆಸಲು