ಬೆಂಗಳೂರು : ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ‘ಕೈ’ ಹಿಡಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಿದರು. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಶೆಟ್ಟರ್ ಪಕ್ಷದ