ಹುಬ್ಬಳ್ಳಿ : ಬಿಜೆಪಿ ಸರ್ಕಾರವಿದ್ದಾಗ ನಮ್ಮ ಕೈಕೆಳಗೆ ಕೆಲಸ ಮಾಡಿದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಿಂದಿನ ಸಾಲಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ನಾನು ಮತ್ತು ಸದಾನಂದಗೌಡರು ಕುಳಿತುಕೊಳ್ಳಬೇಕು ಎಂದು ಅಣ್ಣಾಮಲೈ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯ ಬಿಜೆಪಿ ಕೆಲವರ ಕಪಿಮುಷ್ಠಿಯಲ್ಲಿದೆ. ಇದರಿಂದ ಈ ರೀತಿ ಪರಿಸ್ಥಿತಿಯಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಿದ್ದ ಅಣ್ಣಾಮಲೈ ಕರೆದುಕೊಂಡು ಹೋಗಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರು.