ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿಲ್ಲ. ಇದರಿಂದಾಗಿ ಅವರು ಅಸಮಾಧಾನಗೊಂಡಿದ್ದಾರೆ. ಈ ನಡುವೆಯೇ ಮಾಜಿ ಸಿಎಂ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಜಗದೀಶ್ ಶೆಟ್ಟರ್ ಅವರು ನಮ್ಮ ನಾಯಕರು.ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ತಪ್ಪೋದಿಲ್ಲ. ಅವರ ಸ್ಪರ್ಧೆ ನಿಶ್ಚಿತ ಎಂದು ಹೇಳಿದ್ದಾರೆ.ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಕಾರಣಾಂತರಗಳಿಂದ ಮೊದಲ ಪಟ್ಟಿಯಲ್ಲಿ ಶೆಟ್ಟರ್ಗೆ ಟಿಕೆಟ್ ಪ್ರಕಟವಾಗಿಲ್ಲ.