ಬೆಂಗಳೂರು: ನವರಸನಾಯಕ ಜಗ್ಗೇಶ್ ಯಶವಂತ ಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸ್ವತಃ ಜಗ್ಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.ಇಂದು ಮಧ್ಯಾಹ್ನ 12. 30 ಕ್ಕೆ ಹೇರೋಹಳ್ಳಿ ಎಆರ್ ಒ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿರುವೆ. ಇರಲಿ ನಿಮ್ಮೆಲ್ಲರ ಶುಭ ಹಾರೈಕೆ ಈ ಪಾಮರನ ಮೇಲೆ. ಸಾಧ್ಯವಾದರೆ ಬನ್ನಿ ಬಂಧುಗಳೇ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ಕೊನೆಯ ಕ್ಷಣದಲ್ಲಿ ಬಿಜೆಪಿ ಜಗ್ಗೇಶ್ ಗೆ ಯಶವಂತಪುರ ಕ್ಷೇತ್ರದ ಟಿಕೆಟ್ ನೀಡಿತ್ತು. ಹಿಂದೆ