ಬೆಳಗಾವಿ : ಹಿರೇಕೋಡಿಯ ಜೈನ ಮುನಿಗಳ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದುರ್ಘಟನೆ ನಡೆಯಬಾರದಿತ್ತು. ಇದರಿಂದ ನನಗೆ ಬಹಳ ನೋವಾಗಿದೆ. ಒಬ್ಬ ಸ್ವಾಮೀಜಿ, ಸಂತ ಯಾವುದೇ ಅಪೇಕ್ಷೆ ಇಲ್ಲದೇ ಜೀವನ ನಡೆಸುತ್ತಾರೆ. ಅಂಥವರಿಗೆ ಯಾವುದೇ ಕಾರಣಕ್ಕೂ ಹೀಗೆ ಆಗಬಾರದು ಎಂದಿದ್ದಾರೆ. ನಮ್ಮ ರಾಜ್ಯದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು