ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟಿಗೆ ಬೆಂಬಲಿಸಿ ಕರ್ನಾಟಕದ ಕೋಲಾರದಲ್ಲಿ ಪ್ರತಿಭಟನೆ ಆರಂಭವಾಗಿದೆ. ತಮಿಳುನಾಡಿನ ಹೆಚ್ಚಿನ ಪ್ರಭಾವ ಇರುವ, ತಮಿಳಿಗರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಕೆಜಿಎಫ್ನಲ್ಲಿ ಇಂದು ಮುಂಜಾನೆ 10 ಗಂಟೆಗೆ ಜಲ್ಲಿಕಟ್ಟು ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಲಾಯಿತು. 10ಗಂಟೆಯಿಂದ ಆರಂಭವಾದ ಪ್ರತಿಭಟನೆ 2 ಗಂಟೆಗಳ ಕಾಲ ಮುಂದುವರೆಯಿತು. ಪ್ರತಿಭಟನಾಕಾರರು ರಸ್ತೆ ತಡೆಯಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಹೀಗಾಗಿ ಪೊಲೀಸರು ಮತ್ತು